Text copied!
Bibles in Kannada

ಲೂಕ 22:43-49 in Kannada

Help us?

ಲೂಕ 22:43-49 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.
44 ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
45 ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,
46 ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
47 ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,
48 ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.
49 ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.
ಲೂಕ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019