Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 23

ಲೂಕ 23:13-22

Help us?
Click on verse(s) to share them!
13ತರುವಾಯ ಪಿಲಾತನು ಮುಖ್ಯಯಾಜಕರನ್ನೂ, ಅಧಿಕಾರಿಗಳನ್ನೂ, ಪ್ರಜೆಗಳನ್ನೂ ಒಟ್ಟಾಗಿ ಕರೆಯಿಸಿ,
14ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
15ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
16ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು.
17(ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)
18ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
19ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.
20ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.
21ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು.
22ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.

Read ಲೂಕ 23ಲೂಕ 23
Compare ಲೂಕ 23:13-22ಲೂಕ 23:13-22