Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 23

ಲೂಕ 23:18-33

Help us?
Click on verse(s) to share them!
18ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
19ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.
20ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.
21ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು.
22ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
23ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.
24ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ,
25ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.
26ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
27ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು.
28ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.
29ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.
30ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.
31ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.
32ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.
33ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.

Read ಲೂಕ 23ಲೂಕ 23
Compare ಲೂಕ 23:18-33ಲೂಕ 23:18-33