Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 23

ಲೂಕ 23:28-41

Help us?
Click on verse(s) to share them!
28ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.
29ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.
30ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.
31ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.
32ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.
33ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.
34ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
35ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
36ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,
37“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು.
38ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.
39ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
40ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?
41ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,

Read ಲೂಕ 23ಲೂಕ 23
Compare ಲೂಕ 23:28-41ಲೂಕ 23:28-41