Text copied!
Bibles in Kannada

ಲೂಕ 23:30-35 in Kannada

Help us?

ಲೂಕ 23:30-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.
31 ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.
32 ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.
33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.
34 ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
35 ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
ಲೂಕ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019