Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 23

ಲೂಕ 23:40-49

Help us?
Click on verse(s) to share them!
40ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?
41ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
42“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.
43ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
44ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
46ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
47ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
48ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು.
49ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.

Read ಲೂಕ 23ಲೂಕ 23
Compare ಲೂಕ 23:40-49ಲೂಕ 23:40-49