Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 23

ಲೂಕ 23:5-12

Help us?
Click on verse(s) to share them!
5ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.
6ಇದನ್ನು ಪಿಲಾತನು ಕೇಳಿ, ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ,
7ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.
8ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.
9ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.
10ಮುಖ್ಯಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು.
11ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
12ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು.

Read ಲೂಕ 23ಲೂಕ 23
Compare ಲೂಕ 23:5-12ಲೂಕ 23:5-12