Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 24

ಲೂಕ 24:14-20

Help us?
Click on verse(s) to share them!
14ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು.
15ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು.
16ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ.
17ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.
18ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು,
19ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
20ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.

Read ಲೂಕ 24ಲೂಕ 24
Compare ಲೂಕ 24:14-20ಲೂಕ 24:14-20