Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 24

ಲೂಕ 24:19-22

Help us?
Click on verse(s) to share them!
19ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
20ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.
21ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.
22ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.

Read ಲೂಕ 24ಲೂಕ 24
Compare ಲೂಕ 24:19-22ಲೂಕ 24:19-22