Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 24

ಲೂಕ 24:40-46

Help us?
Click on verse(s) to share them!
40ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು.
41ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,
42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು.
43ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು.
44ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.
45ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.
46ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,

Read ಲೂಕ 24ಲೂಕ 24
Compare ಲೂಕ 24:40-46ಲೂಕ 24:40-46