Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 2

ಲೂಕ 2:21-27

Help us?
Click on verse(s) to share them!
21ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.
22ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
24ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.
25ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
26ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
27ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,

Read ಲೂಕ 2ಲೂಕ 2
Compare ಲೂಕ 2:21-27ಲೂಕ 2:21-27