Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 2

ಲೂಕ 2:24-38

Help us?
Click on verse(s) to share them!
24ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.
25ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
26ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
27ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,
28ಸಿಮೆಯೋನನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ,
29“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
30ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.
32ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.
33ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು,
34ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;
35ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.
36ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
37ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
38ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.

Read ಲೂಕ 2ಲೂಕ 2
Compare ಲೂಕ 2:24-38ಲೂಕ 2:24-38