Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 2

ಲೂಕ 2:32-46

Help us?
Click on verse(s) to share them!
32ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.
33ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು,
34ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;
35ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.
36ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
37ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
38ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.
39ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.
40ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.
41ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.
42ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.
43ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ,
44ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,
45ಆತನನ್ನು ಕಾಣದಿದ್ದಾಗ ತಿರುಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು.
46ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.

Read ಲೂಕ 2ಲೂಕ 2
Compare ಲೂಕ 2:32-46ಲೂಕ 2:32-46