Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 2

ಲೂಕ 2:40-52

Help us?
Click on verse(s) to share them!
40ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.
41ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.
42ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.
43ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ,
44ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,
45ಆತನನ್ನು ಕಾಣದಿದ್ದಾಗ ತಿರುಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು.
46ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.
47ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.
48ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,
49ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.
50ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.
51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.
52ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.

Read ಲೂಕ 2ಲೂಕ 2
Compare ಲೂಕ 2:40-52ಲೂಕ 2:40-52