Text copied!
Bibles in Kannada

ಲೂಕ 4:10-16 in Kannada

Help us?

ಲೂಕ 4:10-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;
11 ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
12 ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.
13 ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.
14 ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
15 ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
16 ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
ಲೂಕ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019