Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 4

ಲೂಕ 4:4-19

Help us?
Click on verse(s) to share them!
4ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.
5ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,
6“ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;
7ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು.
8ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.
9ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
10‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;
11ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
12ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.
13ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.
14ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
15ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
16ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
17ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,
18“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
19ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.”

Read ಲೂಕ 4ಲೂಕ 4
Compare ಲೂಕ 4:4-19ಲೂಕ 4:4-19