Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 4

ಲೂಕ 4:9-32

Help us?
Click on verse(s) to share them!
9ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
10‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;
11ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
12ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.
13ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.
14ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
15ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
16ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
17ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,
18“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
19ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.”
20ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,
21ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,
22ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
23ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.
24ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
25ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
26ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.
27ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.
28ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,
29ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
30ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.
31ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,
32ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

Read ಲೂಕ 4ಲೂಕ 4
Compare ಲೂಕ 4:9-32ಲೂಕ 4:9-32