Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 5

ಲೂಕ 5:1-13

Help us?
Click on verse(s) to share them!
1ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
2ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
3ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
4ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.
5ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.
6ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.
7ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
8ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
9ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.
10ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.
11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.
12ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
13ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.

Read ಲೂಕ 5ಲೂಕ 5
Compare ಲೂಕ 5:1-13ಲೂಕ 5:1-13