Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 5

ಲೂಕ 5:29-36

Help us?
Click on verse(s) to share them!
29ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
30ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
31ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;
32ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
33ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
34ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?
35ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.
36ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.

Read ಲೂಕ 5ಲೂಕ 5
Compare ಲೂಕ 5:29-36ಲೂಕ 5:29-36