31ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
32“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
33ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
34ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.