Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 7

ಲೂಕ 7:6-19

Help us?
Click on verse(s) to share them!
6ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.
7ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
8ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು.
9ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
10ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಸ್ವಸ್ಥನಾಗಿರುವುದನ್ನು ಕಂಡರು.
11ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು.
12ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.
13ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,
14ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.
15ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
16ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
17ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.
18ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು,
19ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.

Read ಲೂಕ 7ಲೂಕ 7
Compare ಲೂಕ 7:6-19ಲೂಕ 7:6-19