Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 8

ಲೂಕ 8:15-35

Help us?
Click on verse(s) to share them!
15ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
16“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
17ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.
18ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
19ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
20ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,
21ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
22ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.
23ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.
24ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
25ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
26ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.
27ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
28ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
29ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
30ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
31ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.
32ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
33ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
34ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,
35ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.

Read ಲೂಕ 8ಲೂಕ 8
Compare ಲೂಕ 8:15-35ಲೂಕ 8:15-35