Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 8

ಲೂಕ 8:3-18

Help us?
Click on verse(s) to share them!
3ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
4ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,
5“ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
6ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.
7ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.
8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.
9ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ,
10ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
11ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
12ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
13ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
14ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
15ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
16“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
17ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.
18ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.

Read ಲೂಕ 8ಲೂಕ 8
Compare ಲೂಕ 8:3-18ಲೂಕ 8:3-18