Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 8

ಲೂಕ 8:30-38

Help us?
Click on verse(s) to share them!
30ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
31ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.
32ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
33ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
34ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,
35ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
36ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
37ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
38ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,

Read ಲೂಕ 8ಲೂಕ 8
Compare ಲೂಕ 8:30-38ಲೂಕ 8:30-38