Text copied!
Bibles in Kannada

ಲೂಕ 9:28-33 in Kannada

Help us?

ಲೂಕ 9:28-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.
29 ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.
30 ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.
31 ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32 ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.
33 ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
ಲೂಕ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019