Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 9

ಲೂಕ 9:51-61

Help us?
Click on verse(s) to share them!
51ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.
52ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.
53ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.
54ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,
55ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು.
56ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.
57ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
58ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
59ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
60ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.
61ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.

Read ಲೂಕ 9ಲೂಕ 9
Compare ಲೂಕ 9:51-61ಲೂಕ 9:51-61