Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ವಿಮೋ - ವಿಮೋ 12

ವಿಮೋ 12:3-8

Help us?
Click on verse(s) to share them!
3ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
4ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.
5ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.
6ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
7ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.
8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.

Read ವಿಮೋ 12ವಿಮೋ 12
Compare ವಿಮೋ 12:3-8ವಿಮೋ 12:3-8