Text copied!
Bibles in Kannada

ವಿಮೋ 12:3-8 in Kannada

Help us?

ವಿಮೋ 12:3-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
4 ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.
5 ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.
6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
7 ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.
8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.
ವಿಮೋ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019