15ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
16ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.
17ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
18ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,
19ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
20ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.