Text copied!
Bibles in Kannada

1 ಅರಸು 15:21-29 in Kannada

Help us?

1 ಅರಸು 15:21-29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು.
22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
23 ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.
24 ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
25 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
26 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
27 ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.
28 ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
29 ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
1 ಅರಸು 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019