Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 17

1 ಅರಸು 17:13-22

Help us?
Click on verse(s) to share them!
13ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
14ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.
15ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.
16ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
17ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.
18ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
19ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.
20ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.
21ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು.
22ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.

Read 1 ಅರಸು 171 ಅರಸು 17
Compare 1 ಅರಸು 17:13-221 ಅರಸು 17:13-22