Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 17

1 ಅರಸು 17:3-11

Help us?
Click on verse(s) to share them!
3ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.
4ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
5ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.
6ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
7ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.
8ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,
9ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
10ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.
11ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.

Read 1 ಅರಸು 171 ಅರಸು 17
Compare 1 ಅರಸು 17:3-111 ಅರಸು 17:3-11