Text copied!
Bibles in Kannada

1 ಅರಸು 17:3-11 in Kannada

Help us?

1 ಅರಸು 17:3-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.
4 ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
5 ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.
6 ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
7 ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.
8 ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,
9 ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
10 ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.
11 ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.
1 ಅರಸು 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019