Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 18

1 ಅರಸು 18:39-43

Help us?
Click on verse(s) to share them!
39ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.
40ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
41ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.
42ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
43ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

Read 1 ಅರಸು 181 ಅರಸು 18
Compare 1 ಅರಸು 18:39-431 ಅರಸು 18:39-43