Text copied!
Bibles in Kannada

1 ಅರಸು 19:17-21 in Kannada

Help us?

1 ಅರಸು 19:17-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
20 ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
21 ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
1 ಅರಸು 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019