Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 19

1 ಅರಸು 19:3-6

Help us?
Click on verse(s) to share them!
3ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
4ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
5ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
6ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.

Read 1 ಅರಸು 191 ಅರಸು 19
Compare 1 ಅರಸು 19:3-61 ಅರಸು 19:3-6