Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 1

1 ಅರಸು 1:2-11

Help us?
Click on verse(s) to share them!
2ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು.
3ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.
4ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.
5ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.
6ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.
7ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.
8ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.
9ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು.
10ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಆಮಂತ್ರಿಸಿರಲಿಲ್ಲ.
11ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?

Read 1 ಅರಸು 11 ಅರಸು 1
Compare 1 ಅರಸು 1:2-111 ಅರಸು 1:2-11