Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 20

1 ಅರಸು 20:6-13

Help us?
Click on verse(s) to share them!
6ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.
7ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.
8ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು.
9ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ, “ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು” ಎಂದು ಹೇಳಿ ಕಳುಹಿಸಿದನು. ದೂತರು ಬಂದು ಈ ಮಾತನ್ನು ಬೆನ್ಹದದನಿಗೆ ತಿಳಿಸಿದರು.
10ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.
11ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.
12ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
13ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.

Read 1 ಅರಸು 201 ಅರಸು 20
Compare 1 ಅರಸು 20:6-131 ಅರಸು 20:6-13