Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 21

1 ಅರಸು 21:1-8

Help us?
Click on verse(s) to share them!
1ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.
2ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು.
3ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.
4“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
5ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.
6ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.
7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.
8ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

Read 1 ಅರಸು 211 ಅರಸು 21
Compare 1 ಅರಸು 21:1-81 ಅರಸು 21:1-8