Text copied!
Bibles in Kannada

1 ಅರಸು 21:1-8 in Kannada

Help us?

1 ಅರಸು 21:1-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.
2 ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು.
3 ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.
4 “ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.
6 ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.
7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.
8 ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.
1 ಅರಸು 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019