Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 21

1 ಅರಸು 21:10-26

Help us?
Click on verse(s) to share them!
10ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.
11ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.
12ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.
13ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
14ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.
15ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು.
16ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.
17ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು.
18ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
19ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.
20ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.
21ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.
22ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ
23ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.
24ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ” ಅಂದನು.
25ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.
26ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.

Read 1 ಅರಸು 211 ಅರಸು 21
Compare 1 ಅರಸು 21:10-261 ಅರಸು 21:10-26