Text copied!
Bibles in Kannada

1 ಅರಸು 22:19-22 in Kannada

Help us?

1 ಅರಸು 22:19-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
20 ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
21 ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
22 ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
1 ಅರಸು 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019