Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 22

1 ಅರಸು 22:31-40

Help us?
Click on verse(s) to share them!
31ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.
32ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
33ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
34ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
35ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
36ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
37ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.
38ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
39ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
40ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.

Read 1 ಅರಸು 221 ಅರಸು 22
Compare 1 ಅರಸು 22:31-401 ಅರಸು 22:31-40