Text copied!
Bibles in Kannada

1 ಅರಸು 22:43-47 in Kannada

Help us?

1 ಅರಸು 22:43-47 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
44 ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
45 ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
46 ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.
47 ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.
1 ಅರಸು 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019