Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 22

1 ಅರಸು 22:44-52

Help us?
Click on verse(s) to share them!
44ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
45ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
46ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.
47ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.
48ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
49ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
50ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.
51ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.
52ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

Read 1 ಅರಸು 221 ಅರಸು 22
Compare 1 ಅರಸು 22:44-521 ಅರಸು 22:44-52