Text copied!
Bibles in Kannada

1 ಅರಸು 2:19-31 in Kannada

Help us?

1 ಅರಸು 2:19-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
20 ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.
21 ಆಗ ಆಕೆಯು, “ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು” ಎಂದಳು.
22 ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.
23 ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.
24 ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.
25 ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.
26 ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.
27 ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.
28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
29 ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.
30 ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
31 ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
1 ಅರಸು 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019