Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 2

1 ಅರಸು 2:30-35

Help us?
Click on verse(s) to share them!
30ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
31ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
32ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
33ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
34ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.
35ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.

Read 1 ಅರಸು 21 ಅರಸು 2
Compare 1 ಅರಸು 2:30-351 ಅರಸು 2:30-35