Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 2

1 ಅರಸು 2:7-14

Help us?
Click on verse(s) to share them!
7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
8ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.
9ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು.
10ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
11ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.
12ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.
13ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು.
14ಆಮೇಲೆ ಅವನು, “ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ” ಎಂದನು. ಅದಕ್ಕೆ ಆಕೆಯು, “ಹೇಳು” ಎಂದಳು.

Read 1 ಅರಸು 21 ಅರಸು 2
Compare 1 ಅರಸು 2:7-141 ಅರಸು 2:7-14