Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 3

1 ಅರಸು 3:11-24

Help us?
Click on verse(s) to share them!
11ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.
12ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.
13ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.
14ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.
15ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.
16ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
17ಅವರಲ್ಲಿ ಒಬ್ಬಳು ಅರಸನಿಗೆ, “ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.
18ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು. ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ
19ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.
20ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು.
21ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ” ಎಂದು ಹೇಳಿದಳು.
22ಆಗ ಎರಡನೆಯವಳು, “ಹಾಗಲ್ಲ, ಬದುಕಿರುವವನು ನನ್ನ ಮಗನು ಸತ್ತಿರುವವನು ನಿನ್ನ ಮಗನು” ಎಂದು ನುಡಿದಳು. ಮೊದಲನೆಯವಳು ತಿರುಗಿ, “ಅಲ್ಲ, ಸತ್ತಿರುವವನು ನಿನ್ನ ಮಗನು, ಬದುಕಿರುವವನು ನನ್ನ ಮಗನು” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.
23ಆಗ ಅರಸನು, “ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ.
24ನನಗೊಂದು ಕತ್ತಿಯನ್ನು ತಂದು ಕೊಡಿರಿ” ಎಂದು ಸೇವಕರಿಗೆ ಹೇಳಿದನು.

Read 1 ಅರಸು 31 ಅರಸು 3
Compare 1 ಅರಸು 3:11-241 ಅರಸು 3:11-24