Text copied!
Bibles in Kannada

1 ಅರಸು 3:8-16 in Kannada

Help us?

1 ಅರಸು 3:8-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ.
9 ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.
10 ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.
11 ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.
12 ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.
13 ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.
14 ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.
15 ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.
16 ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
1 ಅರಸು 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019